
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲ್ಲೂಕು ಘಟಕದಿಂದ ನವಲಗುಂದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ರಾಧಾ ಕುಲಕರ್ಣಿ ಅವರಿಗೆ ಅಕ್ಷರ ದಾಸೋಹ ನೌಕರರು ಮನವಿ ಸಲ್ಲಿಸಿದರು. ಅಡುಗೆ ಸಹಾಯಕಿಯರ ಸಂಘದ ತಾಲ್ಲೂಕು ಅಧ್ಯಕ್ಷೆ ಸುನಂದಾ ಚಿಗರಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಇದ್ದರು.






















