ಬೀದರ:ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಔರಾದ್ ತಾಲೂಕಿನ ಜಮಲಾಪುರ್ ಸರಕಾರಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಔರಾದ್ ತಾಲೂಕು ಆಸ್ಪತ್ರೆಗೆ ದಾಖಲಗಿರುವ ಮಕ್ಕಳ್ನನ್ನು ಭೇಟಿ ಮಾಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ಜಮಲಾಪುರ್ ಗ್ರಾಮದ ಸರಕಾರಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೇರಿದಂತೆ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.