ಕಲಬುರಗಿ:ನಗರದ ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ)ಯದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣಾರ್ಥ ಆಯೋಜಿಸಿರುವ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾ ಆರ್.ಜಾನೆ ಉದ್ಘಾಟಿಸಿದರು. ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿ ಜಂಟಿ ನಿರ್ದೇಶಕ ಪ್ರೊ.ಶಿವಶರಣ ಗೊಳ್ಳೆ, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ, ಡಾ.ಟಿ.ವ್ಹಿ.ಅಡಿವೇಶ, ಡಾ.ಮಲ್ಲೇಶಪ್ಪ ಕುಂಬಾರ, ಡಾ.ವಿಜಯಕುಮಾರ ಸಾಲಿಮನಿ, ಡಾ.ರಾಜಕುಮಾರ ಸಲಗರ ಇದ್ದರು.