
ನಗರದ ಕೆ.ಆರ್. ಪುರಂನಲ್ಲಿ ವಾಸವಿ ಎಂ.ಎಸ್.ಸಿ.ಎಂ. ಕೋ- ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ೩ನೇ ಶಾಖೆಯನ್ನು ಶ್ರೀ ವಾಸವಿ ಪೀಠಾಧ್ಯಕ್ಷ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿಯವರು ಉದ್ಘಾಟಿಸಿದರು. ಬ್ಯಾಂಕ್‌ನ ಅಧ್ಯಕ್ಷ ಆರ್.ಪಿ. ರವಿಶಂಕರ್, ಕೇಂಬ್ರಿಡ್ಜ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಿ.ಕೆ. ಮೋಹನ್ ಬಾಬು, ವಿಧಾನಪರಿಷತ್ ನ ಶಾಸಕ ಡಿ.ಟಿ. ಶ್ರೀನಿವಾಸ್, ಮಾಜಿ ಶಾಸಕಿ ಪೂರ್ಣಿಮಾ, ಆರ್ಯ ವೈಶ್ಯ ಮಂಡಳಿ ಪ್ರಧಾನ ಕಾರ್ಯದರ್ಶಿ ಜಿ. ವೆಂಕಟೇಶ್ ಬಾಬು, ಬ್ಯಾಂಕ್‌ನ ಆಡಳಿತ ಮಂಡಳಿ ನಿರ್ದೇಶಕರುಗಳು, ಸಿಬ್ಬಂದಿ ಉಪಸ್ಥಿತರಿದ್ದರು.

























