ಕಲಬುರಗಿ:ವಿಶ್ವವಿದ್ಯಾಲಯ ಅನುದಾನ ಆಯೋಗ ಎಸ್‍ಸಿ/ಎಸ್‍ಟಿ ಮತ್ತು ಓಬಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ತಂದಿರುವ ನಿಯಮಾವಳಿ(2026)ಗಳಿಗೆ ಸುಪ್ರೀಂಕೋರ್ಟ್ ನೀಡಿರುವ ತಡೆ ಆಜ್ಞೆಯನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು. ಸಮಿತಿ ರಾಜ್ಯ ಸಂಚಾಲಕ ಡಾ.ಡಿ.ಜಿ.ಸಾಗರ, ಬಿ.ಸಿ.ವಾಲಿ, ಸುರೇಶ ಹಾದಿಮನಿ, ಎಸ್.ಪಿ.ಸುಳ್ಳದ್, ಉಮೇಶ್ ನರೋಣಾ, ಪ್ರೊ.ಆರ್.ಕೆ.ಹುಡಗಿ ಸೇರಿದಂತೆ ಮತ್ತಿತರರು ಇದ್ದರು.