
ಕಲಬುರಗಿ: ಜಿಲ್ಲಾಡಳಿತ, ಜಿ.ಪಂ. ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಇಂದು ಜಿಲ್ಲೆಯ ಸರಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲಾ ಮುಖ್ಯಗುರುಗಳ 2025-26ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಸುಧಾರಣಾ ಮತ್ತು ಪ್ರಗತಿ ಪರಿಶೀಲಾ ಸಭೆ ಜರುಗಿತು. ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಬೆಂಗಳೂರಿನ ಆರ್‍ಐಇ ನಿರ್ದೇಶಕರಾದ ಸುಪ್ರಿನೋ ಮ್ಯಾಂತ್ರೋ ಸೇರಿದಂತೆ ಮತ್ತಿತರರ ಅಧಿಕಾರಿಗಳು ಇದ್ದರು.





















