
ಕಲಬುರಗಿ: ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ ಕಾರ್ಯಾಲಯ ಸಭಾಂಗಣದಲ್ಲಿಂದು ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ ಜೀತ ಪದ್ಧತಿ ರದ್ಧತಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಅವರು ಉದ್ಘಾಟಿಸಿದರು. ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ,ಸಹಾಯಕ ಕಾರ್ಮಿಕ ಆಯುಕ್ತ ಮೊಹಮ್ಮದ್ ಬಷೀರ್ ಅನ್ಸಾರಿ,ಜಿಪಂ ಯೋಜನಾ ನಿರ್ದೇಶಕ ಜಗದೇವ ಬಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶರಣಪ್ಪ ಹಳಿಮನಿ,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ ಪಾಟೀಲ ಅವರು ಸೇರಿದಂತೆ ಹಲವರಿದ್ದರು.





















