
ಕಲಬುರಗಿ: ಸಂವಿಧಾನಬದ್ಧ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಕೇಂದ್ರ ಸರ್ಕಾರದ ಕರಾಳ ಎಸ್.ಐ.ಆರ್ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರ ನಿರ್ಣಯ ಕೈಗೊಳ್ಳಲು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕದ ನೆತೃತ್ವದಲ್ಲಿಂದು ಜಿಲ್ಲಾಧಿಕಾರಿಗಳ ಕಚೇರಿ ಎದರು ಪ್ರತಿಭಟನೆ ಕೈಗೊಂಡು ಬೇಡಿಕೆಯ ಮನವಿಪತ್ರವನ್ನು ಜಿಲ್ಲಾಡಳಿತದ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಯಿತು. ಸಂಘಟನೆಯ ಜಿಲ್ಲಾಧ್ಯಕ್ಷೆ ಗೌರಮ್ಮ ಮಾಕಾ, ಸಂಚಾಲಕರಾದ ರೇಣುಕಾ ಸರಡಗಿ, ಶರಣು ಕಣ್ಣಿ, ಸುನಿತಾ ಕೊಳ್ಳೂರ, ಸುಗರಾ ಬೇಗಂ, ಕಲಾವತಿ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.





















