
ಕಲಬುರಗಿ:ತಾಲ್ಲೂಕಿನ ಕೆಸರಟಗಿ ಗ್ರಾಮದ ಹತ್ತಿರವಿರುವ ಆಶ್ರಯ ಕಾಲೋನಿಯ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಬೇಕು, ನಾಗರಿಕ ಸೌಲಭ್ಯ ಒದಗಿಸಬೇಕು ಮತ್ತು ಸಂಪರ್ಕ ರಸ್ತೆ ಕಲ್ಪಿಸಬೇಕು ಎಂದು ಆಗ್ರಹಿಸಿ ಸಿಟಿಜನ್ ಫೋರಂ ಫಾರ್ ಪೀಸ್ ಆ್ಯಂಡ್ ಜಸ್ಟೀಸ್ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಸಂಘಟನೆಯ ಸಂಚಾಲಕ ಎಂ.ಬಿ.ಸಜ್ಜನ್, ಶರಣಬಸಪ್ಪ ಮಮಶೆಟ್ಟಿ, ದೇವು ಬಿರಾದಾರ, ಜಾವೀದ್ ಹುಸೇನ್, ನಾಗಯ್ಯ ಸ್ವಾಮಿ, ಅಶ್ವಿನಿ, ಸೈಯದ್ ಹುಸೇನ್, ಮೋಹನ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.



























