ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಗ್ರಾಮ ದೇವತೆ ಶ್ರೀದ್ಯಾಮವ್ವ ಹಾಗೂ ಶ್ರೀಲಕ್ಕವ್ವ ತಾಯಿಯ ನೂತನ ಮೂರ್ತಿ ಪ್ರತಿಷ್ಠಾಪನೆ ನಡೆಯಿತು. ಬೆಳಿಗ್ಗೆ ರುದ್ರಾಭಿಷೇಕ ಮತ್ತು ಹೋಮ-ಹವನ ಜರುಗಿತು. ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು. ಗ್ರಾಮದ ಸಕಲ ಸದ್ಭಕ್ತರಿಗೆ ಅನ್ನಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.