ಕಲಬುರಗಿ: ನಗರದ ಸರದಾರ ವಲ್ಲಭಭಾಯಿ ಪಟೇಲ್ ಎಜ್ಯುಕೇಷನ್ ಟ್ರಸ್ಟ್ ಸಂಚಾಲಿತ ರಮಾಬಾಯಿ ಜಹಾಗೀರದಾರ್ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಶ್ರೀ ಸೇವಾಲಾಲರ 287ನೇ ಜಯಂತಿಯನ್ನು ಆಚರಿಸಲಾಯಿತು. ಶ್ರೀ ದೇವಿದಾಸ ಪವಾರ ಪ್ರಾಚಾರ್ಯರು ಸರಕಾರಿ ಪದವಿ ಪೂರ್ವ ಕಾಲೇಜು ಸೂಪರ್ ಮಾರ್ಕೆಟ್ ಕಲಬುರಗಿ ಅವರು ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸಿ ಪೂಜೆ ಸಲ್ಲಿಸಿದರು. ಆಡಳಿತ ಮಂಡಳಿಯ ಸದಸ್ಯರು ಪ್ರಾಂಶುಪಾಲರಾದ ಡಾ|| ಭುರ್ಲಿ ಪ್ರಹ್ಲಾದ ಶ್ರೀಸತೀಶ ಕಾಟಕೆ ಹಾಗು ಸಿಬ್ಬಂಧಿ ವರ್ಗ ಉಪಸ್ಥಿತರಿದ್ದರು.