
ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ನೋಡಲ್ ಅಧೀನದಲ್ಲಿ ಜಿಲ್ಲೆಯ ಸರಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳ ತರಬೇತಿದಾರರ 2025-26ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಕೈ.ತ.ಉ.ಇ.ಜಂಟಿ ನಿರ್ದೇಶಕಿ ಮಂಜುಳಾ ಎಸ್., ದಾವಣಗೆರೆಯ ಐಟಿಓಟಿ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳ್ಳಿ, ಬಸವರಾಜ ಯಲ್ಹೇರಿ, ಮುರಲೀಧರ ರತ್ನಗಿರಿ, ಸುರೇಶ ವಗ್ಗೆ, ಶಕೀಲ್ ಅನ್ಸಾರಿ ಇದ್ದರು.
























