
ಕಲಬುರಗಿ: ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ನೆತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಮನವಿ ಸಲ್ಲಿಸಿ ಮಟ್ಕಾ ಸೇರಿದಂತೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವ 108 ಅಂಬುಲೆನ್ಸ್ ವಾಹನ ಚಾಲಕರಿಬ್ಬರನ್ನು ಸೇವೆಯಿಂದ ವಜಾ ಗೊಳಿಸುವಂತೆ ಆಗ್ರಹಿಸಲಾಯಿತು. ವೇದಿಕೆಯ ಜಿಲ್ಲಾಧ್ಯಕ್ಷ ಸಂದೀಪ ಭರಣಿ ಸೇರಿದಂತೆ ಹಲವರಿದ್ದರು.
























