
ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ .ಆರ್. ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್, ಅಧಿಕಾರಿಗಳೊಂದಿಗೆ ಹುಬ್ಬಳ್ಳಿ ಹೊಸೂರ ಸರ್ಕಲ್ ದಿಂದ ಕಿತ್ತೂರು ಚೆನ್ನಮ್ಮ ವೃತ್ತದ ವರೆಗೆ ಮೇಲ್ಸೇತುವೆ ಕಾಮಗಾರಿಯ ಪ್ರಗತಿ ಪರಿಶೀಲನೆ ಮಾಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ವೇಳೆ ಶಾಸಕರಾದ ಮಹೇಶ್ ಟೆಂಗಿನಕಾಯಿ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




























