ಕಲಬುರಗಿ: ಯುನೈಟೆಡ್ ಆಸ್ಪತ್ರೆಯ 14ನೇ ವಾರ್ಷಿಕೋತ್ಸವದ ಅಂಗವಾಗಿ ಆಸ್ಪತ್ರೆಯ ಆವರಣದಲ್ಲಿ ಇಂದು ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಮತ್ತು ಎಸ್‍ಪಿ ಅಡ್ಡೂರು ಶ್ರೀನಿವಾಸಲು ಅವರು ಉದ್ಘಾಟಿಸಿದರು. ಆಸ್ಪತ್ರೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ.ವಿಕ್ರಮ್ ಸಿದ್ದಾರೆಡ್ಡಿ, ಡಾ.ವೀಣಾ ಸಿದ್ದಾರೆಡ್ಡಿ, ಡಾ.ಬಶೀರ್ ಸೇರಿದಂತೆ ಮತ್ತಿತರರು ಇದ್ದರು.