
ಕಲಬುರಗಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯ ಭವ್ಯ ಮೆರವಣಿಗೆ ನಡೆಯಿತು. ಸಮಾಜ ಬಾಂಧವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
























