
ಕಲಬುರಗಿ: ವಿಶೇಷ ಚೇತನರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಶೇ.5 ರಷ್ಟು ರಾಜಕೀಯ ಮೀಸಲಾತಿ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಒಕ್ಕೂಟದ ರಾಜ್ಯ ಅಧ್ಯಕ್ಷ ಶಿವಗೇನಿ ಅತ್ತನೂರು, ತಿಪ್ಪಮ್ಮ ಎಂ., ವಿಜಯಕುಮಾರ, ರಾಜು, ಸಿದ್ದು ಬಿರಾದಾರ, ಶಿವಲಿಂಗಪ್ಪ ಸೇರಿದಂತೆ ಮತ್ತಿತರರು ಇದ್ದರು.

























