ಕಲಬುರಗಿ: ಕಲಬುರಗಿ,ಯಾದಗಿರಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ರೈತರ ಬಾಕಿ ಹಣ ಪಾವತಿಸಬೇಕು,ಸರಕಾರ ಪ್ರತಿ ಟನ್ ಕಬ್ಬಿಗೆ 50 ರೂ ಪ್ರೋತ್ಸಾಹಧನ ನೀಡುವಂತೆ ಆಗ್ರಹಿಸಿ ಇಂದು ಕರ್ನಾಟಕ ಪ್ರಾಂತ ರೈತ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ದೇವು ಬಿರಾದಾರ ಸೇರಿದಂತೆ ಹಲವರು ಪಾಲ್ಗೊಂಡರು.