ಕಲಬುರಗಿ: ಕನ್ನಡನಾಡು ಪ್ರಕಾಶನದ 2025ರ 6 ಕೃತಿಗಳ ಲೋಕಾರ್ಪಣೆ ಮತ್ತು 2024ರ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿಂದು ನಡೆಯಿತು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ.ಮಾತೋಶ್ರೀ ದಾಕ್ಷಾಯಿಣಿ ಶರಣಬಸಪ್ಪ ಅಪ್ಪ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ, ಗುವಿವಿ ಕುಲಸಚಿವ ಪ್ರೊ.ರಮೇಶ ಲಂಡನಕರ್, ಕನ್ನಡ ನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ, ಡಾ.ಸ್ವಾಮಿರಾವ ಕುಲಕರ್ಣಿ, ಡಾ.ಶರಣಬಸಪ್ಪ ವಡ್ಡನಕೇರಿ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ರಾಜೇಂದ್ರ ಕೊಂಡಾ ಇದ್ದರು.