
ಕಲಬುರಗಿ: ತಾಲೂಕಿನ ಬೇಲೂರ ( ಜೆ) ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ವಿನಂತಿಸಿದ ಕುಮಸಿ ಗ್ರಾಪಂ ಮಾಜಿ ಅಧ್ಯಕ್ಷ ಶ್ರೀಧರ ಪಾಟೀಲ ಅವರಿಗೆ ಅಸಭ್ಯವಾಗಿ ಮಾತನಾಡಿದ ಗ್ರಾಪಂ ಪಿಡಿಒ ಅವರನ್ನು ಅಮಾನತು ಮಾಡಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಬೇಲೂರ ( ಜೆ) ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.


























