
ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ನಗರದ ಕಬ್ಬನ್ ಉದ್ಯಾನವನದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಇಂದು ನಡೆದ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಸಮಸ್ಯೆಗಳ ಕುರಿತ ವಿಚಾರ ಸಂಕೀರಣ, ೭೫ ವರ್ಷಕ್ಕೂ ವಯೋಮಿತಿ ಮೀರಿದ ನಿವೃತ್ತ ನೌಕರರ ಅಭಿನಂದನಾ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ಅವರನ್ನು ಸಂಘದ ಅಧ್ಯಕ್ಷ ಡಾ. ಎಲ್. ಭೈರಪ್ಪರವರು ಸನ್ಮಾನಿಸಿ ಗೌರವಿಸಿದರು. ಕರಾಸನೌಸಂ ರಾಜ್ಯಾಧ್ಯಕ್ಷ ಡಾ. ಸಿ.ಎಸ್ ಷಡಾಕ್ಷರಿ, ಶಾಹಿನ್ ಗ್ರೂಪ್ ಆಫ್ ವಿದ್ಯಾಸಂಸ್ಥೆ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಪ್ರಧಾನ ಕಾರ್ಯದರ್ಶಿ ರಂಗೇಗೌಡ, ಖಜಾಂಚಿ ಎಸ್.ಎಂ. ಆನಂದಪ್ಪ ಮತ್ತಿತರರು ಉಪಸ್ಥಿತರಿದ್ದರು.



























