ನಗರದ ಶ್ರೀ ಬನಶಂಕರಿ ಸಾಮೂಹಿಕ ವಿವಾಹ ವೇದಿಕೆ ವತಿಯಿಂದ ಇಂದು ನಡೆದ 27ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಶ್ರೀ ದ್ರೌಪದಿ ಆದಿಪರಾಶಕ್ತಿ ಮಹಾಸಂಸ್ಥಾನ ಪೀಠದ ಅಧ್ಯಕ್ಷ ಶ್ರೀ ಬಾಲಯೋಗಿ ಸಾಯಿ ಮಂಜುನಾಥ್ ಮಹಾರಾಜ್ ಶ್ರೀಗಳು ನೂತನ ವಧು-ವರರನ್ನು ಆಶೀರ್ವದಿಸಿದರು. ನಟಿ ತಾರಾ, ಬಿಬಿಎಂಪಿ ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎ.ಎಚ್. ಬಸವರಾಜು, ಮಾಜಿ ಮೇಯರ್ ಎಸ್.ಕೆ. ನಟರಾಜ್, ನಟಿ ಅಶ್ವಿನಿಗೌಡ ಮತ್ತಿತರರು ಉಪಸ್ಥಿತರಿದ್ದರು.