ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಟೆನಿಸ್ ಅಂಕಣದಲ್ಲಿ ಕಲಬುರಗಿ ಐ.ಟಿ.ಎಫ್ ವುಮೆನ್ಸ್ ಟೂರ್ನಿ-2026ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಶಶೀಲ ಜಿ.ನಮೋಶಿ, ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಮೇಯರ್ ವರ್ಷಾ ರಾಜೀವ್ ಜಾನೆ, ಕುಡಾ ಅಧ್ಯಕ್ಷ ಮಜರ್ ಆಲಂಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಜಿ.ಪಂ.ಸಿಇಓ ಭಂವರ್ ಸಿಂಗ್ ಮೀನಾ, ಎಸ್‍ಪಿ ಅಡ್ಡೂರು ಶ್ರೀನಿವಾಸಲು, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಸೇರಿದಂತೆ ಮತ್ತಿತರರು ಇದ್ದರು.