ಕಲಬುರಗಿ: ರಾಜ್ಯದ ಅನುಸೂಚಿತ ಉದ್ದಿಮೆಗಳಿಗೆ ಕನಿಷ್ಠ ವೇತನ ಪ್ರಕಟಣೆಗೆ ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಲಬುರಗಿ ವಿಭಾಗದ ಉಪ ಕಾರ್ಮಿಕ ಆಯುಕ್ತರ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಅಧ್ಯಕ್ಷ ಎಂ.ಬಿ.ಸಜ್ಜನ್, ಪ್ರಧಾನ ಕಾರ್ಯದರ್ಶಿ ಶಾಂತಾ ಘಂಟೆ, ನಾಗಯ್ಯ ಸ್ವಾಮಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.