
ಕಲಬುರಗಿ: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಸಮಿತಿಯಲ್ಲಿ ರಿಮ್ಸ್ ತಂತ್ರಜ್ಞಾನದ ಮುಖಾಂತರ ಟೆಂಡರ್ ಪದ್ಧತಿ ಅಳವಡಿಸುವಂತೆ ಆಗ್ರಹಿಸಿ ಕಲಬುರಗಿಯ ಆಹಾರ ಧಾನ್ಯ ಮತ್ತು ಬೀಜ ವ್ಯಾಪಾರಿಗಳ ಸಂಘದಿಂದ ಎಪಿಎಂಸಿ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.ಸಂಘದ ಅಧ್ಯಕ್ಷ ಸಂತೋಷ ಲಂಗರ,ಕಾರ್ಯದರ್ಶಿ ಬಸವರಾಜ ತಡಕಲ್ ಅವರು ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತು ವರ್ತಕರು ಉಪಸ್ಥಿತರಿದ್ದರು.

























