
ಕಲಬುರಗಿ: ನಗರದ ಡಾ. ಎಸ್.ಎಂ ಪಂಡಿತ ರಂಗಮಂದಿರದಲ್ಲಿಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳ ಮತ್ತು ಬೆಳೆವಿಮೆ ಪರಿಹಾರ ಬಿಡುಗಡೆ ಕಾರ್ಯಕ್ರಮ ಜರುಗಿತು.ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ,ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್ ಪಾಟೀಲ,ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ.ವೈ ಪಾಟೀಲ,ತಿಪ್ಪಣ್ಣಪ್ಪ ಕಮಕನೂರ,ಜಗದೇವ ಗುತ್ತೇದಾರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್,ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್,ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ,ಎಸ್ಪಿ ಅಡ್ಡೂರು ಶ್ರೀನಿವಾಸಲು , ಜಿಪಂ ಸಿಇಒ ಭಂವರಸಿಂಗ್ ಮೀನಾ,ಪಾಲಿಕೆ ಆಯುಕ್ತ ಅವಿನಾಶ ಸಿಂಧೆ,ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.






















