ಕಲಬುರಗಿ: 56,342 ಖಾಲಿ ಹುದ್ದೆಗಳ ಭರ್ತಿಯಲ್ಲಿ 15% ಒಳ ಮೀಸಲಾತಿಯನ್ನು ಗ್ರೂಪ್ ಎ, ಬಿ, ಸಿ ವರ್ಗೀಕರಣದಂತೆ ಜಾರಿಗೊಳಿಸಲು ಒತ್ತಾಯಿಸಿ ಜಿಲ್ಲಾ ಮಾದಿಗ ಸಮಾಜದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ದಶರಥ ಕಲಗುರ್ತಿ, ರಾಜು ವಾಡೇಕರ್, ರಮೇಶ ವಾಡೇಕರ್, ಗೋಪಾಲ ನಾಟೀಕಾರ, ಶ್ರೀನಿವಾಸ ರಾಮನಾಳಕರ್, ಮಲ್ಲಿಕಾರ್ಜುನ ದೊಡ್ಡಮನಿ, ಮಲ್ಲಿಕಾರ್ಜುನ ಜೀನಕೇರಿ, ಲಿಂಗರಾಜ ತಾರಫೈಲ್, ಚಂದ್ರಕಾಂತ ನಾಟೀಕಾರ, ಶರಣು ಸಗರಕರ್, ದತ್ತು ಭಾಸಗಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.