
ಕಲಬುರಗಿ: ಕೇಂದ್ರ ಸರ್ಕಾರ ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್‍ಗೆ 60 ರಷ್ಟು ಮತ್ತು ವಾಣಿಜ್ಯ ಸಿಲಿಂಡರ್‍ಗೆ ರೂ.114 ರಷ್ಟು ಹೆಚ್ಚಳ ಮಾಡಿರುವುದನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಸಿಪಿಐ ಪಕ್ಷದ ರಾಜ್ಯ ಸಮಿತಿ ಸದಸ್ಯ ಮೌಲಾ ಮುಲ್ಲಾ, ಜಿಲ್ಲಾ ಸಹ ಕಾರ್ಯದರ್ಶಿಗಳಾದ ಪ್ರಭುದೇವ ಯಳಸಂಗಿ, ಪದ್ಮಾವತಿ ಮಾಲಿಪಾಟೀಲ, ಸಾಜೀದ್ ಅಹ್ಮದ್, ಭೀಮಾಶಂಕರ ಮಾಡಿಯಾಳ, ಹಣಮಂತರಾಯ ಅಟ್ಟೂರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






















