ಕಲಬುರಗಿ: ಕೇಂದ್ರ ಸರ್ಕಾರ ಎಲ್‍ಪಿಜಿ ಗ್ಯಾಸ್ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದಿನ ರಸ್ತೆಯಲ್ಲಿ ಇಂದು ಕಟ್ಟಿಗೆ ಹಚ್ಚಿ ಒಲೆ ಉರಿಸಿ ರೊಟ್ಟಿ ಬೇಯಿಸುವುದರ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಅಧ್ಯಕ್ಷೆ ರೇಣುಕಾ ಸಿಂಗೆ, ಚಂದ್ರಿಕಾ ಪರಮೇಶ್ವರ ಸೇರಿದಂತೆ ಮಹಿಳಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.