
ಅಂತರರಾಷ್ಟ್ರೀಯ ಮತ್ತು ಏಷಿಯನ್ ಕ್ರೀಡಾಕೂಟ ಹಾಗೂ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಕ್ರೀಡಾಪಟುಗಳಿಗೆ ಕರ್ನಾಟಕ ಗೃಹ ಮಂಡಳಿಯಿಂದ ನಿವೇಶನ ಹಂಚಿಕೆ ಮಾಡುವಂತೆ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್‌ರವರಿಗೆ ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ. ಗೋವಿಂದರಾಜ್‌ರವರು ಮನವಿ ಸಲ್ಲಿಸಿದರು. ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮೋಹನ್ ರಾಜ್, ಕರ್ನಾಟಕ ಗೃಹ ಮಂಡಳಿ ಆಯುಕ್ತ ಬಿ. ದಯಾನಂದ ಮತ್ತಿತರರು ಇದ್ದಾರೆ.


























