ಸರ್ಕಾರದ ಬಜೆಟ್ ಮಂಡನೆ ಕುರಿತಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದ ಕಾನಿಷ್ಕ ಹೋಟೆಲ್‌ನಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಚಳವಳಿ ಅಯ್ಯಪ್ಪ, ಜಿಲ್ಲಾಧ್ಯಕ್ಷ ಎನ್. ಪ್ರಸಾದ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಈ ಬಾರಿ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ-ಟಿಎಸ್‌ಪಿಗೆ ನೀಡಿರುವ ಅನುದಾನವನ್ನು ಇತರೆ ಇಲಾಖೆಗೆ ಬಳಕೆ ಮಾಡದಂತೆ ಸರ್ಕಾರಕ್ಕೆ ಮನವಿ ಮಾಡಲಾಯಿತು.