ಕಲಬುರಗಿ: ಕನ್ನಡ ಹಾಗೂ ಮಾತೃಭಾಷಾ ಶಾಲೆಗಳನ್ನು ಅನುದಾನಕ್ಕೊಳಪಡಿಸುವಂತೆ, ಶಾಲೆಗಳಿಗೆ ವಿಧಿಸಿದ ಷರತ್ತುಗಳನ್ನು ಸಡಿಲಗೊಳಸಲು, 371(ಜೆ) ಅಡಿಯಲ್ಲಿ ಅನುದಾನ ನೀಡಲು ಮತ್ತು ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಒಕ್ಕೂಟದ ಕಾರ್ಯದರ್ಶಿ ಅರುಣಕುಮಾರ ಎಸ್.ಪೋಚಾಲ, ಅನಿಲಕುಮಾರ ಡಾಂಗೆ, ಚನ್ನಬಸಪ್ಪ ಗಾರಂಪಳ್ಳಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.