ಕಲಬುರಗಿ: 6 ವರ್ಷದೊಳಗಿನ ಮಕ್ಕಳು ಐಸಿಡಿಎಸ್ ನಡಿಯಲ್ಲಿರುವುದನ್ನು ಖಾತ್ರಿ ಪಡಿಸಿಕೊಂಡು, 6 ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿ ಕೇಂದ್ರದ ಮುಖಾಂತರ ಆಹಾರ, ಆರೋಗ್ಯ ಮತ್ತು ಶಿಕ್ಷಣ ಕಲ್ಪಿಸುವುದು ಸೇರಿದಂತೆ ಪ್ರಮುಖ 17 ಬೇಡಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೆತೃತ್ವದಲ್ಲಿ ಬೃಹತ ಪ್ರತಿಭಟನೆ ಕೈಗೊಳ್ಳಲಾಯಿತು. ರಫತ ಸುಲ್ತಾನ, ನೇತ್ರಾ, ಆರ್.ರತ್ನಮ್ಮ, ಗುರುಬಾಯಿ ಜಗದೇವಿ, ಮಹಾದೇವಿ, ವಾಸಂತಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.