
ಕಲಬುರಗಿ: ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಪೊಲೀಸ್ ಇಲಾಖೆ ಮತ್ತು ಯುನೈಟೆಡ್ ಆಸ್ಪತ್ರೆ ವತಿಯಿಂದ ಪತ್ರಕರ್ತರಿಗೆ ಹೆಲ್ಮೆಟ್ ವಿತರಿಸಲಾಯಿತು. ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ,ಸಂಚಾರಿ ಎಸಿಪಿ, ಸಂಚಾರಿ ಪೊಲೀಸ್ ಠಾಣೆ ಪಿಐ ಶಕೀಲ್ ಅಂಗಡಿ, ಯುನೈಟೆಡ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ವಿಕ್ರಮ್ ಸಿದ್ದಾರೆಡ್ಡಿ ಇದ್ದರು.



























