ಕಲಬುರಗಿ: ಕಲಬುರಗಿ ಮಹಾನಗರ ವ್ಯಾಪ್ತಿಯಲ್ಲಿನ ಎಲ್ಲ ಬೀದಿ ವ್ಯಾಪಾರಿಗಳ ಸಮೀಕ್ಷೆ , ನಗರದ ರಸ್ತೆಗಳ ಅಗಲೀಕರಣ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಅಖಿಲ ಕರ್ನಾಟಕ ಬೀದಿ ವ್ಯಾಪಾರಿಗಳ ಸಂಘದಿಂದ ಪಾಲಿಕೆ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ರಾಜ್ಯಾಧ್ಯಕ್ಷ ಜಗನ್ನಾಥ ಸೂರ್ಯವಂಶಿ, ಜಿಲ್ಲಾಧ್ಯಕ್ಷ ಅಮೃತ ಪಾಟೀಲ ಸಿರನೂರ,ರವಿ ವಂಟಿ, ಜಗತ್ ಸಿಂಗ್,ಮಹಿಬೂಬ ಶೇಕ್ ಸೇರಿದಂತೆ ಹಲವರು ಪಾಲ್ಗೊಂಡರು.