ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದಲ್ಲಿ ನಡೆದ “ಇಂದಿರಾ ಕ್ರೀಡೋತ್ಸವ-೨೦೨೬”ಅನ್ನು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪದ್ಮಾವತಿರವರು ಉದ್ಘಾಟಿಸಿದರು. ಮಾಜಿ ಮೇಯರ್ ಜೆ. ಹುಚ್ಚಪ್ಪ, ಬಿಬಿಎಂಪಿ ಮಾಜಿ ಸದಸ್ಯ ಎಸ್. ಕೇಶವಮೂರ್ತಿ, ಆಡಳಿತ ಪಕ್ಷದ ಮಾಜಿ ನಾಯಕ ಎಂ. ಶಿವರಾಜು, ಮಾಜಿ ಪಾಲಿಕೆ ಸದಸ್ಯೆ ಮಹದೇವಮ್ಮ, ಪಶ್ಚಿಮ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಲ್ಲವಿ ಪ್ರಭು ಮತ್ತಿತರರು ಉಪಸ್ಥಿತರಿದ್ದರು.