
ಕಲಬುರಗಿ: ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೈಬಿಡುವ ಆದೇಶ ಕೈಬಿಟ್ಟು ಆಶಾಗಳನ್ನು ಮುಂದುವರೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಗರದಲ್ಲಿ ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು. ಸಂಘದ ಅಧ್ಯಕ್ಷೆ ಶಿವಲಿಂಗಮ್ಮ, ಕಾರ್ಯದರ್ಶಿ ಗೀತಾ ಮಳ್ಳಿ, ಗೌರವಾಧ್ಯಕ್ಷ ವಿ.ಜಿ.ದೇಸಾಯಿ, ಎಸ್.ಎಂ.ಶರ್ಮಾ ಸೇರಿದಂತೆ ಮತ್ತಿತರರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು.




























