
ಕಲಬುರಗಿ: ಡಾ.ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ಜಿಲ್ಲಾ ಜಯಂತ್ಯುತ್ಸವ ಸಮಿತಿಯು ನಗರದ ಎಂಎಸ್‍ಕೆ ಮಿಲ್ ಮೈದಾನ ದೀಕ್ಷಾಭೂಮಿಯಲ್ಲಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾವಳಿಯನ್ನು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ಬ್ಯಾಟ್ ಮಾಡುವ ಮೂಲಕ ಉದ್ಘಾಟಿಸಿದರು.ಪಾಲಿಕೆ ಆಯುಕ್ತ ಅವಿನಾಶ ಸಿಂಧೆ, ಸಮಿತಿ ಅಧ್ಯಕ್ಷ ಅಶೋಕ ವೀರನಾಯಕ,ಕಾರ್ಯಾಧ್ಯಕ್ಷ ಮಲ್ಲಪ್ಪ ಹೊಸಮನಿ,ಅರುಣ ಕುರ್ನೆ,ರಾಜೀವ ಜಾನೆ,ಸುರೇಶ ಹಾದಿಮನಿ,ಗಣೇಶ ವಳಕೇರಿ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.





















