ಕಲಬುರಗಿ: ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಆನಂದ ಎಸ್.ದೊಡ್ಡಮನಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ವೇದಿಕೆ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.