
ಕಲಬುರಗಿ:ಲೋಕ ಶಿಕ್ಷಣ ಟ್ರಸ್ಟ್ ವತಿಯಿಂದ ಮಂಗಳವಾರ ನಗರದಲ್ಲಿ ಹಮ್ಮಿಕೊಂಡಿದ್ದ “ಸಿರಿ ಸಂಪದ” ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯ ಡಾ.ಸಿ.ಎಸ್.ಪಾಟೀಲ ಅವರಿಗೆ “ಲೋಕ ಶಿಕ್ಷಣ ಗೌರವ ಪುರಸ್ಕಾರ” ನೀಡಿ ಸತ್ಕರಿಸಲಾಯಿತು. ಶರಣಬಸವೇಶ್ವರ ಸಂಸ್ಥಾನದ ಡಾ.ದಾಕ್ಷಾಯಿಣಿ ಎಸ್.ಅಪ್ಪ, ಶಾಸಕ ಎಂ.ವೈ.ಪಾಟೀಲ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಅಶೋಕ ಹಾರನಳ್ಳಿ, ಗುರುರಾಜ ಕರ್ಜಗಿ ಸೇರಿದಂತೆ ಮತ್ತಿತರ ಗಣ್ಯರು ಇದ್ದರು.




















