
ಕಲಬುರಗಿ: ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಡಾ. ಬಿ.ಆರ್ ಅಂಬೇಡ್ಕರ್ ಅವರ 135 ನೇಯ ಜಯಂತ್ಯುತ್ಸವ ಸಮಿತಿ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲಾಯಿತು.ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ದಶರಥ ಬಾಬು ಒಂಟಿ,ಸಮಿತಿ ಅಧ್ಯಕ್ಷ ಅಶೋಕ ವೀರನಾಯಕ್, ರಾಜೀವ ಜಾನೆ, ಮಲ್ಲಪ್ಪ ಹೊಸಮನಿ, ಸಮಿತಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.






















