
ಸ್ವಚ್ಛ ಸರ್ವೇಕ್ಷಣ ೨೦೨೫- ೨೬ ರ ಅಂಗವಾಗಿ ಗಾಂಧಿನಗರ ವಿಧಾನಸಭಾ ಕ್ಷೇತ್ರ /ದತ್ತಾತ್ರೇಯ ವಾರ್ಡ್‌ನಲ್ಲಿ ಇಂದು ಜಿಬಿಎ ಮತ್ತು ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದ ತ್ಯಾಜ್ಯ ವಿಂಗಡಣೆಯ ಬಗ್ಗೆ ಅರಿವು ಮೂಡಿಸುವ ಜಾಗೃತಿ ಅಭಿಯಾನವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಎಜಿಎಂಎಇಇ ಪೂರ್ಣಿಮಾ, ಕಿರಿಯ ಆರೋಗ್ಯ ಪರಿವೀಕ್ಷಕರು, ಮೇಲ್ವಿಚಾರಕರು, ಮಾರ್ಷಲ್‌ಗಳು, ಪೌರಕಾರ್ಮಿಕರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
























