
ಕಲಬುರಗಿ: ಮಹಿಳಾ ಮೀಸಲಾತಿ ವಿಷಯದಲ್ಲಿ ಸುಳ್ಳು ಮಾಹಿತಿಯನ್ನು ಹಬ್ಬಿಸಿ ಜನರಲ್ಲಿ ಗೊಂದಲ ಉಂಟು ಮಾಡುತ್ತಿರುವ ಬಿಜೆಪಿ ವಿರುದ್ಧ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ರೇಣುಕಾ ಸಿಂಗೆ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






















