ಕಲಬುರಗಿ: ಲೋಕಸಭೆಯಲ್ಲಿ 33%ರಷ್ಟು ಮಹಿಳಾ ಮೀಸಲು ಮಸೂದೆಯನ್ನು ವಿರೋಧಿಸಿ ಮಹಿಳೆಯರಿಗೆ ಅಗೌರವ ತೋರಿದ ಕಾಂಗ್ರೆಸ್ ಪಕ್ಷದ ವಿರುದ್ದ ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ವತಿಯಿಂದ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಮಹಾತ್ಮಾ ಗಾಂಧಿಜಿ ಪ್ರತಿಮೆವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹೇಶ್ವರಿ ವಾಲಿ, ಪಕ್ಷದ ಜಿಲ್ಲಾ ಅಧ್ಯಕ್ಷ ಬಾಲರಾಜ ಗುತ್ತೇದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬೀರಬಿಟ್ಟಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.