
ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ ನಗರದ ಕನ್ನಡ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ವರನಟ ಡಾ.ರಾಜಕುಮಾರ ಅವರ 97ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಉದ್ಘಾಟಿಸಿದರು. ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿ ಜಡಿಯಪ್ಪ ಗೆದ್ಲಗಟ್ಟಿ, ಕಸಾಪ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ರಾಜಕುಮಾರ ಕುಲಕರ್ಣಿ ಸೇರಿದಂತೆ ಮತ್ತಿತರರು ಇದ್ದರು.






















