
ಕಲಬುರಗಿ: ನಗರದ ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದ 2025-26ನೇ ಶೈಕ್ಷಣಿಕ ಸಾಲಿನ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಕಾರ್ಯಕ್ರಮ ಹಾಗೂ ವಿವಿಧ ಘಟಕಗಳಾದ ಸಾಂಸ್ಕøತಿಕ, ಕ್ರೀಡಾ, ಎನ್‍ಎಸ್‍ಎಸ್, ಎನ್‍ಸಿಸಿ, ರೆಡ್‍ಕ್ರಾಸ್, ರೆಡ್ ರಿಬ್ಬನ್, ಸ್ಕೌಟ್ಸ್ ಮತ್ತು ಗೈಡ್ಸ್, ಡಾ.ಬಿ.ಆರ್.ಅಂಬೇಡ್ಕರ್ ವೇದಿಕೆ ಕಾರ್ಯಚಟುಟಿಕೆಗಳ ಸಮಾರೋಪ ಸಮಾರಂಭವನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ.ಭಾಸ್ಕರ್ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವಿಜಯಕುಮಾರ ಕಟ್ಟಿಮನಿ, ಪ್ರಾಚಾರ್ಯರಾದ ಡಾ.ಸವಿತಾ ತಿವಾರಿ, ಡಾ.ಟಿ.ವ್ಹಿ.ಅಡಿವೇಶ, ಡಾ.ಮಲ್ಲೇಶಪ್ಪ ಕುಂಬಾರ, ಡಾ.ವಿಜಯಕುಮಾರ ಸಾಲಿಮನಿ, ಡಾ.ರಾಜಕುಮಾರ ಸಲಗರ, ಡಾ.ದವಲಪ್ಪ ಬಿ.ಹೆಚ್, ಡಾ.ರವೀಂದ್ರಕುಮಾರ ಭಂಡಾರಿ, ಡಾ.ಶ್ರೀಮಂತ ಹೋಳ್ಕರ್ ಸೇರಿದಂತೆ ಮತ್ತಿತರರು ಇದ್ದರು.






















