ನಗರದ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರರವರು ಭೇಟಿ ನೀಡಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯರ ಆಶೀರ್ವಾದ ಪಡೆದರು. ಮೇ ೯ ರಂದು ಚಿತ್ರದುರ್ಗದಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಮಂತ್ರಣ ನೀಡಿದರು. ಶಾಸಕರಾದ ಹರೀಶ್ ಪೂಂಜಾ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ಮುಖಂಡ ಕೆ. ಉಮೇಶ್ ಶೆಟ್ಟಿ, ಮತ್ತಿತರರು ಇದ್ದರು.