
ಕಲಬುರಗಿ: ನಗರ ಹೊರವಲಯದ ಬುದ್ಧ ವಿಹಾರದಲ್ಲಿ ಇಂದು ಬುದ್ಧಪೂರ್ಣಿಮೆಯನ್ನು ಆಚರಿಸಲಾಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಧಾಬಾಯಿ ಖರ್ಗೆ, ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಎಂ.ವೈ.ಪಾಟೀಲ, ಬಿ.ಆರ್.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಮುಖಂಡರಾದ ನೀಲಕಂಠರಾವ ಮೂಲಗೆ, ಶರಣು ಮೋದಿ, ಭೀಮರಾವ ಟಿ.ಟಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸೇರಿದಂತೆ ಮತ್ತಿತರರು ಇದ್ದರು.





















