
ಕಲಬುರಗಿ: ನಗರದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅನುಭವ ಮಂಟಪದಲ್ಲಿ ಇಂದು ನಡೆದ ಸಮಾರಂಭದಲ್ಲಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವತಿಯಿಂದ ನೀಡುವ 2025-26ನೇ ಸಾಲಿನ “ಅವ್ವ ಪ್ರಶಸ್ತಿ”ಯನ್ನು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಿರ್ದೇಶಕಿ ಡಾ.ಗೀತಾ ಈಶ್ವರ ಖಂಡ್ರೆ ಅವರಿಗೆ ನೀಡಿ ಗೌರವಿಸಲಾಯಿತು. ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ದೊಡ್ಡಪ್ಪ ಎಸ್.ಅಪ್ಪ, ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್.ಅಪ್ಪ, ಬಸವರಾಜ ದೇಶಮುಖ, ಡಾ.ಉಮಾತಾಯಿ ದೇಶಮುಖ, ಡಾ.ನೀಲಾಂಬಿಕಾ ಶೇರಿಕಾರ, ಡಾ.ಸೀಮಾ ಪಾಟೀಲ, ಡಾ.ರಾಜಲಕ್ಷ್ಮೀ ಸೇರಿದಂತೆ ಮತ್ತಿತರರು ಇದ್ದರು.






















