ಹೋಮಿಯೋಪತಿ ಫೌಂಡೇಶನ್ ವತಿಯಿಂದ ಜಯನಗರದ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಇಂದು ನಡೆದ ವಿಶ್ವ ಹೋಮಿಯೋಪತಿ ದಿನಾಚರಣೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರು ಉದ್ಘಾಟಿಸಿದರು. ಶಾಸಕ ಸಿ.ಕೆ. ರಾಮಮೂರ್ತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಕುಲಪತಿ ಡಾ. ಭಗವಾನ್, ಕರ್ನಾಟಕ ಹೋಮಿಯೋಪತಿ ಮಂಡಳಿ ಅಧ್ಯಕ್ಷ ನಾಡೋಜ ಡಾ. ಬಿ.ಟಿ. ರುದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.